ಸ್ಯಾಂಡಲ್‍ವುಡ್‍ನ ಕೃಷ್ಣ ಎಂದೇ ಖ್ಯಾತಿ ಪಡೆದಿರುವ ನಟ ಅಜಯ್ ರಾವ್ ಮತ್ತು ಪತ್ನಿ ಸ್ವಪ್ನ ಇಂದು ತಮ್ಮ 5ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.

ಅಜಯ್ ತಮ್ಮ ಬಾಲ್ಯದ ಗೆಳತಿ ಸ್ವಪ್ನ ಅವರ ಜೊತೆ 2014 ಡಿಸೆಂಬರ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಂದಿಗೆ ಇವರ ದಾಂಪತ್ಯ ಜೀವನಕ್ಕೆ ಐದು ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಅಜಯ್ ಮತ್ತು ಸ್ವಪ್ನ ಪರಸ್ಪರ ಸೋಶಿಯಲ್ ಮೀಡಿಯಾದಲ್ಲಿ ಶುಭಾ ಕೋರಿದ್ದಾರೆ.

ಜೊತೆಗೆ ಈ ದಂಪತಿ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ತಾಯಿಯ ದರ್ಶನ ಪಡೆದುಕೊಂಡಿದ್ದಾರೆ. ಜೊತೆಗೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ. ದೇವಾಲಯದ ಮುಂದೆ ನಿಂತುಕೊಂಡು ಫೋಟೋ ಕ್ಲಿಕ್ಕಿಸಿಕೊಂಡಿದ್ದು, ಆ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಫೋಟೋ ನೋಡಿ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ವಿಶ್ ಮಾಡುತ್ತಿದ್ದಾರೆ.

ಈ ದಂಪತಿಗೆ 2018ರಲ್ಲಿ ಮುದ್ದಾದ ಹೆಣ್ಣು ಮಗು ಜನಿಸಿತ್ತು. ಮಗಳಿಗೆ ಚೆರಿಷ್ಮಾ ಎಂದು ಅಜಯ್ ಹೆಸರಿಟ್ಟಿದ್ದಾರೆ. ಇತ್ತೀಚೆಗಷ್ಟೆ ಒಂದು ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿದ್ದಾರೆ. ಸದ್ಯಕ್ಕೆ ಅಜಯ್ ‘ಶೋಕಿವಾಲಾ’, ‘ಕೃಷ್ಣ ಟಾಕೀಸ್’ ಸಿನಿಮಾಗಳಲ್ಲಿ ಬ್ಯುಸಿಯಿದ್ದಾರೆ.